'ಮೌಲ್ಯ ಶಿಕ್ಷಣ ಎಂಬುದು ಬೋಧಿಸಿ ಅದಕ್ಕೊಂದು ಪರೀಕ್ಷೆ ಇಟ್ಟು ಅದರಿಂದ ತಿಳಿದುಕೊಳ್ಳುವಂತಹದ್ದಲ್ಲ.' ಎಂದೂ ಹೇಳಿದರು.ಆಗ ನನಗೆ ಅನ್ನಿಸಿದ್ದು ಮೌಲ್ಯ ಶಿಕ್ಷಣದ ಮೌಲ್ಯವನ್ನು ಮಕ್ಕಳು ಚಿಕ್ಕವರಾಗಿದ್ದಾಗಿನಿಂದಲೇ ತಿಳಿಸಿ ಹೇಳಬೇಕು ಎಂದು.ಹಿರಿಯರು ತಂದೆತಾಯಿಯರು ನಡೆದಂತೆ ಮಕ್ಕಳು ಅನುಸರಿಸುತ್ತಾರೆ.
ನಿತ್ಯವೂ ದೇವರಿಗೆ ಕೈಮುಗಿಯುವ ತಾಯಿಯೊಡನೆ ಮಗಳೂ ಕೈ ಮುಗಿಯುತ್ತಾಳೆ. ಅಪ್ಪ ಸಿಗರೇಟು ಸೇದುವುದನ್ನು ನೋಡಿದ ಮಗ ಅದನ್ನೇ ಅನುಕರಿಸುತ್ತಾನೆ. ಹೀಗಾಗಿ ತಮ್ಮ ಮಕ್ಕಳ ಉನ್ನತಿಗೆ ಹಾಗು ಮೌಲ್ಯಯುತ ಜೀವನಕ್ಕೆ ತಂದೆತಾಯಿಯರೂ ಮೌಲ್ಯಯುತವಾಗಿ ಬದುಕುವುದು ಅವಶ್ಯಕ.
Domenico Ghirlandaio |
ಹಠಮಾರಿ ಮಗನೊಬ್ಬನ ತಾಯಿಗೆ ಏನು ಮಾಡಿದರೂ ಮಗನನ್ನು ತಿದ್ದಲಾಗಲಿಲ್ಲ. ಶಾಲೆಯಿಂದ ಸಣ್ಣ ಪುಟ್ಟ ವಸ್ತುಗಳನ್ನು ಕದ್ದು ತರುತ್ತಿದ್ದ. ಅವನು ದೊಡ್ಡವನಾದಾಗ ತಾಯಿ ಒಂದು ದಿನ ನಿಶ್ಚಯ ಮಾಡಿ ಹೇಳಿದಳು "ಮಗೂ ಕದಿಯುವುದು ಕೆಟ್ಟ ಕೆಲಸ ಎಂದು ನಿನಗೆ ಗೊತ್ತಿಲ್ಲವೇ? " ಎಂದು. ಆಗ ಮಗ "ನನಗೆ ಬೇಕಾದ್ದನ್ನು ನಾನೂ ಮಾಡುತ್ತೀನಿ" ಎಂದ. ಅದಕ್ಕೆ ತಾಯಿ "ಸರಿ ಹಾಗಾದರೆ ನೀನು ಒಂದೊಂದು ಕಳ್ಳತನ ಮಾಡಿದಾಗಲೂ ನಾನೂ ಒಂದೊಂದು ಮೊಳೆ ತಂದು ಈ ಗೋಡೆಗೆ ಹೊಡೆಯುತ್ತೇನೆ" ಎಂದಳು. ಅವನು ಅದರಿಂದ ತನ್ನ ಗಂಟೇನು ಹೋಗುವುದಿಲ್ಲ ಎಂದು ಸುಮ್ಮನಿದ್ದ. ಕೆಲವು ತಿಂಗಳು ಕಳೆದ ನಂತರ ಗೋಡೆಯ ಮೇಲೆಲ್ಲಾ ಮೊಳೆಗಳಿದ್ದವು. ಮತ್ತೂ ಕೆಲವು ಕಾಲ ಕಳೆದ ನಂತರ ಒಮ್ಮೆ ಮಗ ಆ ಗೋಡೆಯನ್ನು ನೋಡಿ "ಛೆ.. ಎಷ್ಟೊಂದು ಕಳ್ಳತನ ಮಾಡಿಬಿಟ್ಟೆ.ತಪ್ಪು ಮಾಡಿಬಿಟ್ಟೆ." ಎಂದು ಪಶ್ಚಾತ್ತಾಪ ಪಟ್ಟು ತಾಯಿಯ ಬಳಿ ಕ್ಷಮೆ ಯಾಚಿಸಿದ.ತನು ಕದ್ದದ್ದೆಲ್ಲವನ್ನು ಹಿಂತಿರುಗಿಸುವುದಾಗಿ ಹೇಳಿದ. ಅವನ ತಾಯಿ ಆಗ ಗೋಡೆಯ ಮೇಲಿದ್ದ ಮೊಳೆಗಳನ್ನೆಲ್ಲ ಕಿತ್ತು ಹಾಕಿದಳು. ಗೋಡೆಯ ಮೇಲಿದ್ದ ಕಲೆಗಳನ್ನು ತೋರಿಸಿ " ನೋಡಿದೆಯಾ? ಒಂದು ಬಾರಿ ಕೆಟ್ಟ ಕೆಲಸ ಮಾಡಿದರೂ ಅಳಿಸಲಾಗದ ಕಲೆ ಬಿದ್ದು ಹೋಗುತ್ತದೆ. ಈಗ ನೀನು ಸುಮ್ಮನಿದ್ದರೆ ಆ ಕಲೆಗಳು ಹಾಗೆ ಇರುತ್ತವೆ.ಅದನ್ನು ಹೋಗಲಾಡಿಸಲು ಒಳ್ಳೆ ಕೆಲಸಗಳನ್ನು ಮಾಡು. ಸುಣ್ಣ ತುಂಬಿಸಿ ಅದನ್ನು ಮುಚ್ಚು." ಎಂದಳು. ಎಷ್ಟು ಅರ್ಥವತ್ತಾದ ಮಾತು. ಕೆಟ್ಟ ಕೆಲಸದಿಂದ ಕಳಂಕ ಬರುತ್ತದೆ ಅದನ್ನು ಹೋಗಲಾಡಿಸಲು ಒಳ್ಳೆ ಕೆಲಸಗಳನ್ನು ಮಾಡಬೇಕು. ಅದೇ ಒಳ್ಳೆ ಕೆಲಸಗಳಲ್ಲೇ ತೊಡಗಿಕೊಂಡಿದ್ದರೆ ಎಂತಹ ಸುಂದರವಾಗುತ್ತದೆ ಈ ಜೀವನ!
ಆದರೆ ಈಗಿನ ಪರಿಸ್ಥಿತಿ ಹೇಗಾಗುತ್ತಿದೆ ಎಂದರೆ ಅಪ್ಪ ಅಮ್ಮ ಇಬ್ಬರೂ ಕೆಲಸಕ್ಕೆ ಹೋಗುತ್ತಾರೆ, ಅಜ್ಜ ಅಜ್ಜಿ ಇಬ್ಬರೂ ವೃದ್ಧಾಶ್ರಮದಲ್ಲಿದ್ದಾರೆ.ಮಕ್ಕಳು ಭಾರವಾದ ಪುಸ್ತಕದ ಹೊರೆ ಹೊತ್ತು ಕಾನ್ವೆಂಟ್ ಗೆ ಹೋಗುತ್ತಾರೆ ಅಥವಾ ಇನ್ನು ಚಿಕ್ಕವರಾದರೆ ತಂದೆ ತಾಯಿಯರು ಮಕ್ಕಳನ್ನು ನೋಡಿಕೊಳ್ಳುವ ದಾದಿಯರಿಗೆ ಸಾವಿರಾರು ರೂಪಾಯಿ ತೆತ್ತು ಅವರ ಬಳಿ ಬಿಟ್ಟು ಹೋಗುತ್ತಾರೆ. ಇಂತಹ ಮಕ್ಕಳಿಗೆ ಎಲ್ಲಿಂದ ಸಿಗಬೇಕು ನೈತಿಕ ಅಥವಾ ಮೌಲ್ಯ ಶಿಕ್ಷಣ? ಅಜ್ಜ ಅಜ್ಜಿಯರು ಮೊಮ್ಮಕ್ಕಳ ಜೊತೆ ಕಾಲ ಕಳೆಯುತ್ತಿದ್ದರೆ ಅವರು ಅಲ್ಪ ಸ್ವಲ್ಪ ಮೌಲ್ಯಯುತ ಜ್ಞಾನವನ್ನು ಮಕ್ಕಳಿಗೆ ಉಣಿಸಬಹುದು. ಅನವರತ " ಓದು ಓದು ಓದು" ಎಂದು ಹೇಳುತ್ತಿದ್ದಾರೆ ಮಕ್ಕಳಲ್ಲಿರುವ ಉಳಿದ ಪ್ರತಿಭೆಗಳು ಬೆಳಕಿಗೆ ಬರುವುದಿಲ್ಲ, ಓದೂ ಅಷ್ಟು ಪರಿಣಾಮಕಾರಿಯಾಗಿರುವುದಿಲ್ಲ. ಮಕ್ಕಳು ಆಟವಾಡಿಕೊಂಡು ನಲಿದಾಡುತ್ತಾ ಕಲಿಯಬೇಕು.ಇಲ್ಲದಿದ್ದರೆ ಜೀವನ ಕೇವಲ ಯಾಂತ್ರಿಕವಾಗುತ್ತದೆ. ಹಿಂದೆ ಸಮಾಜದಲ್ಲಿದ್ದ ಎಲ್ಲ ಸಮಸ್ಯೆಗಳಿಗಿಂತ ಭೀಕರವಾಗಿ ಇಂದು ಈ ಸಮಸ್ಯೆ ನಮ್ಮೆಲ್ಲರ ಮುಂದೆ ನಿಂತಿದೆ. ಅದನ್ನು ಸಮರ್ಥವಾಗಿ ಎದುರಿಸುವ ಉಪಾಯವೂ ನಮ್ಮ ಬಳಿಯಲ್ಲೇ ಇದೆ.
ತಂದೆ ತಾಯಿಯರಿದ್ದೂ ತಬ್ಬಲಿಗಳಂತಾಗಿರುವ ಇಂದಿನ ಮಕ್ಕಳನ್ನು 'ಕಿಡ್ಸ್ ಗಾರ್ಡಿಂಗ್ ಹೋಂ' ನಲ್ಲೋ ಅಥವಾ ಮತ್ತೆಲ್ಲೋ ಬಿಡುವಾಗಲಾದರೂ ತಾಯಂದಿರಿಗೆ ಎಂದೋ ಕೇಳಿದ "ತಬ್ಬಲಿಯು ನೀನಾದೆ ಮಗನೆ" ಹಾಡು ನೆನಪಿಗೆ ಬರಲಿ..
ಸರ್ವೇ ಭವಂತು ಸುಖಿನಃಆದರೆ ಈಗಿನ ಪರಿಸ್ಥಿತಿ ಹೇಗಾಗುತ್ತಿದೆ ಎಂದರೆ ಅಪ್ಪ ಅಮ್ಮ ಇಬ್ಬರೂ ಕೆಲಸಕ್ಕೆ ಹೋಗುತ್ತಾರೆ, ಅಜ್ಜ ಅಜ್ಜಿ ಇಬ್ಬರೂ ವೃದ್ಧಾಶ್ರಮದಲ್ಲಿದ್ದಾರೆ.ಮಕ್ಕಳು ಭಾರವಾದ ಪುಸ್ತಕದ ಹೊರೆ ಹೊತ್ತು ಕಾನ್ವೆಂಟ್ ಗೆ ಹೋಗುತ್ತಾರೆ ಅಥವಾ ಇನ್ನು ಚಿಕ್ಕವರಾದರೆ ತಂದೆ ತಾಯಿಯರು ಮಕ್ಕಳನ್ನು ನೋಡಿಕೊಳ್ಳುವ ದಾದಿಯರಿಗೆ ಸಾವಿರಾರು ರೂಪಾಯಿ ತೆತ್ತು ಅವರ ಬಳಿ ಬಿಟ್ಟು ಹೋಗುತ್ತಾರೆ. ಇಂತಹ ಮಕ್ಕಳಿಗೆ ಎಲ್ಲಿಂದ ಸಿಗಬೇಕು ನೈತಿಕ ಅಥವಾ ಮೌಲ್ಯ ಶಿಕ್ಷಣ? ಅಜ್ಜ ಅಜ್ಜಿಯರು ಮೊಮ್ಮಕ್ಕಳ ಜೊತೆ ಕಾಲ ಕಳೆಯುತ್ತಿದ್ದರೆ ಅವರು ಅಲ್ಪ ಸ್ವಲ್ಪ ಮೌಲ್ಯಯುತ ಜ್ಞಾನವನ್ನು ಮಕ್ಕಳಿಗೆ ಉಣಿಸಬಹುದು. ಅನವರತ " ಓದು ಓದು ಓದು" ಎಂದು ಹೇಳುತ್ತಿದ್ದಾರೆ ಮಕ್ಕಳಲ್ಲಿರುವ ಉಳಿದ ಪ್ರತಿಭೆಗಳು ಬೆಳಕಿಗೆ ಬರುವುದಿಲ್ಲ, ಓದೂ ಅಷ್ಟು ಪರಿಣಾಮಕಾರಿಯಾಗಿರುವುದಿಲ್ಲ. ಮಕ್ಕಳು ಆಟವಾಡಿಕೊಂಡು ನಲಿದಾಡುತ್ತಾ ಕಲಿಯಬೇಕು.ಇಲ್ಲದಿದ್ದರೆ ಜೀವನ ಕೇವಲ ಯಾಂತ್ರಿಕವಾಗುತ್ತದೆ. ಹಿಂದೆ ಸಮಾಜದಲ್ಲಿದ್ದ ಎಲ್ಲ ಸಮಸ್ಯೆಗಳಿಗಿಂತ ಭೀಕರವಾಗಿ ಇಂದು ಈ ಸಮಸ್ಯೆ ನಮ್ಮೆಲ್ಲರ ಮುಂದೆ ನಿಂತಿದೆ. ಅದನ್ನು ಸಮರ್ಥವಾಗಿ ಎದುರಿಸುವ ಉಪಾಯವೂ ನಮ್ಮ ಬಳಿಯಲ್ಲೇ ಇದೆ.
ತಂದೆ ತಾಯಿಯರಿದ್ದೂ ತಬ್ಬಲಿಗಳಂತಾಗಿರುವ ಇಂದಿನ ಮಕ್ಕಳನ್ನು 'ಕಿಡ್ಸ್ ಗಾರ್ಡಿಂಗ್ ಹೋಂ' ನಲ್ಲೋ ಅಥವಾ ಮತ್ತೆಲ್ಲೋ ಬಿಡುವಾಗಲಾದರೂ ತಾಯಂದಿರಿಗೆ ಎಂದೋ ಕೇಳಿದ "ತಬ್ಬಲಿಯು ನೀನಾದೆ ಮಗನೆ" ಹಾಡು ನೆನಪಿಗೆ ಬರಲಿ..
very good...keep up the good work:)
ಪ್ರತ್ಯುತ್ತರಅಳಿಸಿ